ಪುಷ್ಪಲತಾ ಎಂ.ಎಸ್.
BE, M-Tech | ಸಹ-ಸಂಸ್ಥಾಪಕರು ಮತ್ತು ನಿರ್ದೇಶಕರು - ಕಾರ್ಯಾಚರಣೆಗಳು
ಶ್ರೀಮತಿ ಪುಷ್ಪಲತಾ ಎಂ. ಎಸ್. ಅವರು ತುಮಕೂರಿನ ಪ್ರತಿಷ್ಠಿತ ಸಿದ್ದಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿದರು. ನಂತರ ಬೆಂಗಳೂರಿನ ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ಪವರ್ ಎಲೆಕ್ಟ್ರಾನಿಕ್ಸ್‌ನಲ್ಲಿ ಎಂ ಟೆಕ್ ಪದವಿ ಗಳಿಸಿದರು. ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಪುಷ್ಪಲತಾ ಅವರು ಮೈಕ್ರೊಪ್ರೊಸೆಸರ್‌ಗಳು ಮತ್ತು ಡಿಜಿಟಲ್ ಎಲೆಕ್ಟ್ರಾನಿಕ್ಸ್ ಸಂಬಂಧಿತ ವಿಷಯಗಳನ್ನು ಬೋಧಿಸಿದರು. ನಂತರ ಇಂಡಸ್ ಟೆಕ್ನಾಲಜೀಸ್ ಕಂಪನಿಯಲ್ಲಿ ಎಲೆಕ್ಟ್ರಾನಿಕ್ಸ್ ಘಟಕಗಳ ವಿನ್ಯಾಸ ಮತ್ತು ವಿತರಣಾ ಸಂಸ್ಥೆಯ ಸಹ-ಸಂಸ್ಥಾಪಕರಾಗಿ ಕಾರ್ಯನಿರ್ವಹಿಸಿದರು. ಇಂಡಸ್ ಟೆಕ್ನಾಲಜೀಸ್ ಬೆಂಗಳೂರಿನ ಪ್ರಮುಖ ಸಾರ್ವಜನಿಕ ಕ್ಷೇತ್ರದ ಸಂಸ್ಥೆಗಳು ಮತ್ತು ರಕ್ಷಣಾ ಪ್ರಯೋಗಾಲಯದೊಂದಿಗೆ ಕಾರ್ಯ ನಿರ್ವಹಿಸುತ್ತಿದೆ.
ಪುಷ್ಪಲತಾ ಅವರು ಗರ್ಭಗುಡಿ ಐವಿಎಫ್ ಸೆಂಟರ್‌ನಲ್ಲಿ ಕಾರ್ಯಾಚರಣೆಗಳನ್ನು ನಿರ್ವಹಿಸುವ ಜವಾಬ್ದಾರಿಯಲ್ಲದೆ ಸಂಸ್ಥೆಯ ಕಾರ್ಯ ದಕ್ಷತೆ ಹಾಗೂ ಲಭ್ಯವಿರುವ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯನ್ನು ನಿರ್ವಹಿಸುವ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.